Menu Close

ಬೈಕ್ ಸವಾರ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ : ಸವಾರನ ದುರ್ಮರಣ….

ಬೈಕ್ ಸವಾರ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್‌ಯಾಗಿರುವ ಪರಿಣಾಮ ಬೈಕ್ ಸವಾರ ಅಸುನೀಗಿರುವ ಘಟನೆ

ವಿಜಯಪುರ ತಾಲ್ಲೂಕಿನ ಮದಬಾಬಿ ಕ್ರಾಸ್ ಬಳಿ ಬುಧವಾರ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ನಿವಾಸಿಯಾದ ಕಾಶಿನಾಥ ಮೃತಪಟ್ಟಿರುವ ದುರ್ದೈವಿ. ಅಲ್ಲದೇ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.